KGF-2 ಸಿನಿಮಾ ವೀಕ್ಷಣೆ ವೇಳೆ ಗುಂಡು ಹಾರಿಸಿದ ದುಷ್ಕರ್ಮಿ: ಓರ್ವ ಗಂಭೀರ

Prasthutha|

ಹಾವೇರಿ: ಕೆಜಿಎಫ್- 2 ಸಿನಿಮಾ ವೀಕ್ಷಣೆ ವೇಳೆ ದುಷ್ಕರ್ಮಿಯೋರ್ವ ಗುಂಡು ಹಾರಿಸಿದ ಪರಿಣಾಮ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆ ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ತಡರಾತ್ರಿ ನಡೆದಿದೆ.

- Advertisement -

 ಗುಂಡೇಟಿನಿಂದ ಗಾಯಗೊಂಡವನನ್ನು ವಸಂತಕುಮಾರ(27) ಎಂದು ಗುರುತಿಸಲಾಗಿದೆ.

ಯುವಕನ ಹೊಟ್ಟೆಯ ಭಾಗ ಮತ್ತು ಕಾಲಿಗೆ ಗುಂಡು ತಗುಲಿದೆ. ದುಷ್ಕರ್ಮಿ ರಿವಾಲ್ವಾರ್ ನಿಂದ ಮೂರು ಸುತ್ತು ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ.

- Advertisement -

ಸ್ಥಳಕ್ಕೆ ಎಸ್ಪಿ ಹನುಮಂತರಾಯ, ಹೆಚ್ಚುವರಿ ಎಸ್ಪಿ ವಿಜಯಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಆರೋಪಿ ನಾಪತ್ತೆಯಾಗಿದ್ದಾನೆ.

Join Whatsapp