Home ಟಾಪ್ ಸುದ್ದಿಗಳು “ಬುಲ್ಲಿ ಬಾಯ್ ಆ್ಯಪ್” ತಯಾರಿಸಿದ ದುಷ್ಕರ್ಮಿಗೆ ಜಾಮೀನು

“ಬುಲ್ಲಿ ಬಾಯ್ ಆ್ಯಪ್” ತಯಾರಿಸಿದ ದುಷ್ಕರ್ಮಿಗೆ ಜಾಮೀನು

ಮುಂಬೈ: ಮುಸ್ಲಿಮ್ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಶ್ಲೀಲವಾಗಿ ಚಿತ್ರಿಸಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಹರಾಜು ಹಾಕುತ್ತಿದ್ದ ಬುಲ್ಲಿ ಬಾಯ್ ಆ್ಯಪ್ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಹಾಗೂ ಇತರ ಇಬ್ಬರು ಆರೋಪಿಗಳಿಗೆ ಮುಂಬೈ ಕೋರ್ಟ್ ಜಾಮೀನು ನೀಡಿದೆ.


ನೀರಜ್ ಬಿಷ್ಣೋಯ್, ಔಮ್ಕಾರೇಶ್ವರ್ ಠಾಕೂರ್ ಮತ್ತು ನೀರಜ್ ಸಿಂಗ್ ಅವರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ.ಬಿ.ಶರ್ಮಾ ಜಾಮೀನು ಮಂಜೂರು ಮಾಡಿದ್ದಾರೆ.


ಆರೋಪಿಗಳಿಗೆ ತಲಾ 50 ಸಾವಿರ ಬಾಂಡ್ ನೊಂದಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಆರೋಪಿಗಳು ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ವಿದೇಶ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ. ಪ್ರತಿ ತಿಂಗಳಿಗೊಮ್ಮೆ ಪೊಲೀಸರ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ವಕೀಲ ಶಿವಂ ದೇಶಮುಖ್ ಅವರ ಮೂಲಕ ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ, ಬಿಷ್ಣೋಯ್ ಅವರನ್ನು ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ. ಹಾಗಾಗಿ ಸಮಾನತೆ ನೀಡುವಂತೆ ಕೋರಲಾಗಿತ್ತು. ಅರ್ಜಿಯನ್ನು ಪರಿಗಣಿಸಿ ಕೋರ್ಟ್ ಜಾಮೀನು ನೀಡಿದೆ.

Join Whatsapp
Exit mobile version