ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್‌ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Prasthutha|

ಬೆಂಗಳೂರು: ಕುರುಬರಹಳ್ಳಿ ಕಾವೇರಿ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

- Advertisement -

ತಡರಾತ್ರಿ ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿದ್ದು, ಧಗ ಧಗ ಹೊತ್ತಿ ಉರಿದಿದೆ. ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಟಿಯುವಿ 300  ಕಾರು ಮತ್ತು ಬೈಕ್​ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಸ್ಥಳದಿಂದ ಪಾರಾರಿಯಾಗಿದ್ದಾರೆ.

ಬೆಂಕಿ ಹೊತ್ತಿ ಉರಿಯುವಾಗ ಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp