ಕ್ರೈಸ್ತ ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ ಕಿಡಿಗೇಡಿಗಳು

Prasthutha|

ಥಾಣೆ: ಕ್ರೈಸ್ತ ಧರ್ಮದ ಪ್ರಾರ್ಥನಾ ಮಂದಿರವನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಡೆದಿದೆ.

- Advertisement -


ನಗರದ ತುಳಸಿಧಾಮ್ ಪ್ರದೇಶದಲ್ಲಿ ಕ್ರೈಸ್ತರು ಕಟ್ಟಡವೊಂದನ್ನು ಪ್ರಾರ್ಥನಾ ಮಂದಿರವನ್ನಾಗಿ ಬಳಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ದೂರಿನ ಅನ್ವಯ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295A ಹಾಗೂ ಇನ್ನಿತರ ಕಲಂಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಯಾವುದೇ ಆರೋಪಿಗಳ ಬಂಧನವಾಗಿಲ್ಲ.