ಶಿವಮೊಗ್ಗ: ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

Prasthutha|

- Advertisement -

ಶಿವಮೊಗ್ಗ: ಕಿಡಿಗೇಡಿಗಳು ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಜಿಲ್ಲೆ ‌ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ನಡೆದಿದೆ.

ಕಿಡಿಗೇಡಿಗಳ ಕೃತ್ಯಕ್ಕೆ ಹೊಳೆಹೊನ್ನೂರು ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

- Advertisement -

ಹೊಳೆಹೊನ್ನೂರಿನ ಪ್ರಮುಖ ವೃತ್ತದಲ್ಲಿ ಗಾಂಧೀಜಿ ಪ್ರತಿಮೆಯನ್ನು 18 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿತ್ತು. ತಡರಾತ್ರಿ ಕಿಡಿಗೇಡಿಗಳು ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ

Join Whatsapp