ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಮಾಡಾಳ್ ಮನೆಗೆ ವಾಪಸ್: ವಾಹನದಲ್ಲಿ ಮೆರವಣಿಗೆ

Prasthutha|

ದಾವಣಗೆರೆ: ಲಂಚ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ 6 ದಿನಗಳ ಬಳಿಕ ಚನ್ನಗಿರಿಯ ನಿವಾಸಕ್ಕೆ ವಾಪಸ್ ಆಗಿದ್ದಾರೆ.

- Advertisement -

ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದ ಬೆನ್ನಲ್ಲೇ ವಿರೂಪಾಕ್ಷಪ್ಪ ಮನೆಗೆ ವಾಪಸ್ ಆಗಿದ್ದಾರೆ. ಈ ವೇಳೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರಿನಲ್ಲಿ ಮೆರವಣಿಗೆ ಮಾಡಿದ್ದಾರೆ.

Join Whatsapp