Home ಟಾಪ್ ಸುದ್ದಿಗಳು ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಮಾಡಾಳ್ ಮನೆಗೆ ವಾಪಸ್: ವಾಹನದಲ್ಲಿ ಮೆರವಣಿಗೆ

ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಮಾಡಾಳ್ ಮನೆಗೆ ವಾಪಸ್: ವಾಹನದಲ್ಲಿ ಮೆರವಣಿಗೆ

ದಾವಣಗೆರೆ: ಲಂಚ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ 6 ದಿನಗಳ ಬಳಿಕ ಚನ್ನಗಿರಿಯ ನಿವಾಸಕ್ಕೆ ವಾಪಸ್ ಆಗಿದ್ದಾರೆ.

ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದ ಬೆನ್ನಲ್ಲೇ ವಿರೂಪಾಕ್ಷಪ್ಪ ಮನೆಗೆ ವಾಪಸ್ ಆಗಿದ್ದಾರೆ. ಈ ವೇಳೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರಿನಲ್ಲಿ ಮೆರವಣಿಗೆ ಮಾಡಿದ್ದಾರೆ.

Join Whatsapp
Exit mobile version