ದೆಹಲಿ: ನಾಪತ್ತೆಯಾಗಿದ್ದ ಹದಿಹರೆಯದ ಬಾಲಕನ ಮೃತದೇಹ ಗಂಟಲು ಸೀಳಿದ ಸ್ಥಿತಿಯಲ್ಲಿ ಪತ್ತೆ

Prasthutha|

ನವದೆಹಲಿ: ವಾಯುವ್ಯ ದೆಹಲಿಯ ಮಂಗೋಲ್ ಪುರಿ ಎಂಬಲ್ಲಿಂದ ನಾಪತ್ತೆಯಾಗಿದ್ದ 17ರ ಹರೆಯದ ಬಾಲಕನ ಮೃತದೇಹವು ಶುಕ್ರವಾರ ಬೆಳಗ್ಗೆ ಬ್ಯಾಗ್’ನಲ್ಲಿ ಗಂಟಲು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಗುರುವಾರ ರಾತ್ರಿಯಿಂದ ರೋಹಿಣಿ ಪ್ರದೇಶದಿಂದ ಬಾಲಕ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮೃತದೇಹ ಪತ್ತೆಯಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳೀಯರ ಮಾಹಿತಿಯನ್ನಾಧರಿಸಿ ಮಂಗೋಲ್ ಪುರಿ ಮುಖ್ಯರಸ್ತೆಗೆ ತಲುಪಿದಾಗ, ಸಮೀಪದ ಪೀರ್ ಬಾಬಾ ಮಝಾರ್ ಎಂಬಲ್ಲಿ ಗಂಟಲು ಸೀಳಿದ ಸ್ಥಿತಿಯಲ್ಲಿ ಬಾಲಕನ ಮೃತದೇಹವು ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್’ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಉಪ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ರೋಹಿಣಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 363 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸದ್ಯ ರೋಹಿಣಿ ಪೊಲೀಸ್ ಠಾಣೆಯ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಹಿರಿಯ ಅಧಿಕಾರಿ ಸಮೀರ್ ಶರ್ಮಾ ತಿಳಿಸಿದ್ದಾರೆ.



Join Whatsapp