Home ಟಾಪ್ ಸುದ್ದಿಗಳು ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ: ಸಾವಿನ ಸುತ್ತ ಅನುಮಾನ

ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ: ಸಾವಿನ ಸುತ್ತ ಅನುಮಾನ

0

ಚಿಕ್ಕಮಗಳೂರು: ಕಳೆದ 10 ದಿನಗಳ ಹಿಂದೆ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶವವಾಗಿ ಪತ್ತೆಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದ 33 ವರ್ಷದ KFDC ವಿಭಾಗದ ಫಾರೆಸ್ಟ್ ಗಾರ್ಡ್ ಶರತ್ ಶವವಾಗಿ ಪತ್ತೆಯಾಗಿದ್ದಾರೆ.

ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ ಶವ ಪತ್ತೆಯಾಗಿದೆ. ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು. ಕಳೆದ ನಾಲ್ಕು ತಿಂಗಳ‌ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ರು. ಸಖರಾಯಪಟ್ಟಣ ನೀಲಗಿರಿ ಪ್ಲಾಂಟೇಶನ್ ನಲ್ಲಿ ನರ್ಸರಿ ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದ ಶರತ್ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು ಅನುಮಾನಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ನೀಲಗಿರಿ ಪ್ಲಾಂಟೇಶನ್ ನಲ್ಲಿ ಜೂನ್ 24 ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ರು. ಶರತ್ ಗಾಗಿ ನೂರಾರು ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್ ,ಅರಣ್ಯದಲ್ಲಿ ಹುಡುಕಾಟ ನಡೆಸಿದ್ರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ರೆ ಬಟ್ಟೆ ಪರ್ಸ್ ಒಂದೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು. ಮೊಬೈಲ್ ಶರತ್ ಶವ ಸಿಕ್ಕ ಸ್ಥಳದಿಂದ 20 ಕಿಮೀ ದೂರದಲ್ಲಿ ಪತ್ತೆಯಾಗಿತ್ತು. ಇಂದು ಚಿಕ್ಕಮಗಳೂರು ಹಾಸನ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು, ಪೊಲೀಸರು ಅರಣ್ಯದಲ್ಲಿ ಹುಡುಕಾಟ ನಡೆಸುವಾಗ ಶರತ್ ಶವ ಪತ್ತೆಯಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version