Home ಟಾಪ್ ಸುದ್ದಿಗಳು ನಾಪತ್ತೆಯಾಗಿದ್ದ ನವ ವಿವಾಹಿತೆ ನದಿಯಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ನವ ವಿವಾಹಿತೆ ನದಿಯಲ್ಲಿ ಶವವಾಗಿ ಪತ್ತೆ

ಕಲಬುರಗಿ: ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ನವವಿವಾಹಿತೆ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕಮಲಾಪುರದಲ್ಲಿ ನಡೆದಿದೆ.


ನಾವದಗಿ ಗ್ರಾಮದ ಸೃಷ್ಟಿ ಮಾರುತಿ (21) ಮೃತರು ಎಂದು ಗುರುತಿಸಲಾಗಿದೆ.


ಪದವಿ ಐದನೇಯ ಸೆಮಿಸ್ಟರ್’ನಲ್ಲಿ ಓದುತ್ತಿದ್ದ ಸೃಷ್ಟಿಗೆ ಇತ್ತೀಚೆಗೆ ಮದುವೆಯಾಗಿತ್ತು. ಅತ್ತೆಯ ಮನೆಯಲ್ಲಿದ್ದೇ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿ ಡಿಸೆಂಬರ್ 13 ರಂದು ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಗಂಡ ಮತ್ತು ಆತನ ಕುಟುಂಬಸ್ಥರು ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಸೃಷ್ಟಿ ಗಂಡನ ಕುಟುಂಬಸ್ಥರು ಡಿಸೆಂಬರ್ 14ರ ಬೆಳಗ್ಗೆ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಮನೆಯಿಂದ ಕಾಣೆಯಾಗಿ ಮೂರು ದಿನಗಳ ನಂತರ ಸೃಷ್ಟಿ ಕುರಿಕೋಟಾ ಸೇತುವೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಮಹಾಗಾಂವ್ ಪೊಲೀಸರು ಪರೀಶಿಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.

Join Whatsapp
Exit mobile version