ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ| ಪ್ರಧಾನಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕರು

Prasthutha|

ಹೊಸದಿಲ್ಲಿ:ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಒಂಬತ್ತು ವಿಪಕ್ಷ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(AAP), ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (AAP), ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (TMC), ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (BRS), ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (NC) ನಾಯಕ ಫಾರೂಕ್ ಅಬ್ದುಲ್ಲಾ , ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ನಾಯಕ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (SP) ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ರಾಷ್ಟ್ರೀಯ ಜನತಾ ದಳ (RJD) ತೇಜಸ್ವಿ ಯಾದವ್ ಪತ್ರಕ್ಕೆ ಸಹಿ ಮಾಡಿದ್ದಾರೆ.

ಆದರೆ ಕಾಂಗ್ರೆಸ್, ಡಿಎಂಕೆ ಮತ್ತು ಎಡಪಕ್ಷಗಳು ಸಹಿ ಹಾಕಿಲ್ಲ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ ವಿರೋಧಿಸಿ ಪತ್ರ ಬರೆಯಲಾಗಿದೆ.

- Advertisement -

ಸಿಸೋಡಿಯಾ ಬಂಧನವನ್ನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಚೌಧರಿ ಮತ್ತು ಹಿರಿಯ ನಾಯಕ ಸಂದೀಪ್ ದೀಕ್ಷಿತ್ ಸ್ವಾಗತಿಸಿದ್ದರು.

Join Whatsapp