ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಮೋದಿಗೆ ಪತ್ರ ಬರೆದ 9 ವಿರೋಧ ಪಕ್ಷಗಳ ಮುಖಂಡರು

Prasthutha|

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವದಿಂದ ನಿರಂಕುಶಾಧಿಕಾರಕ್ಕೆ ದೇಶ ಹೋಗುತ್ತಿರುವುದರ ಸೂಚಕವಾಗಿದೆ ಎಂದು ಆರೋಪಿಸಿ ದೇಶದ ಪ್ರಮುಖ ವಿರೋಧ ಪಕ್ಷಗಳ ಮುಖಂಡರು ಪ್ರಧಾನಿ ನರೇಂದ್ರ ಮೋದಿಗೆ ರವಿವಾರ ಜಂಟಿ ಪತ್ರ ಬರೆದಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ಬಿಹಾರ ಡಿಸಿಎಂ ತೇಜಸ್ವಿ ಯಾದವ್, ಶರದ್ ಪವಾರ್, ಫಾರೂಕ್ ಅಬ್ದುಲ್ಲಾ , ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರ ಮೇಲೆ ನಡೆಯುತ್ತಿರುವ ದಾಳಿ ರಾಜಕೀಯ ದ್ವೇಷದಂತೆ ತೋರುತ್ತದೆ ಎಂದು ಪತ್ರದಲ್ಲಿ ಟೀಕಿಸಲಾಗಿದೆ. ಸಿಸೋಡಿಯಾ ವಿರುದ್ಧದ ಆರೋಪಗಳು ಸಂಪೂರ್ಣ ಆಧಾರರಹಿತ ಮತ್ತು ರಾಜಕೀಯ ಪಿತೂರಿಯ ಭಾಗ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಬಿಜೆಪಿಗೆ ಸೇರುವ ವಿಪಕ್ಷಗಳ ನಾಯಕರ ವಿರುದ್ಧದ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳು ನಿಧಾನಗತಿಯ ಧೋರಣೆ ಅನುಸರಿಸುತ್ತವೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

Join Whatsapp