ದುಬೈನ ಕೋಕಾಕೋಲ ಅರೇನಾದಲ್ಲಿ ನಡೆಯುತ್ತಿರುವ ಐಪಿಎಲ್ ಸೀಸನ್ 17 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ ದುಬಾರಿ ಮೊತ್ತಕ್ಕೆ ಹರಾಜಾಗಿದ್ದಾರೆ.
ಪರಿಣಾಮ ಕೆಲವೇ ಕ್ಷಣಗಳಲ್ಲಿ ಮಿಚೆಲ್ ಸ್ಟಾರ್ಕ್ ಮೌಲ್ಯವು 20 ಕೋಟಿ ರೂ. ದಾಟಿತು. ಇನ್ನು ಕೆಕೆಆರ್ 22 ಕೋಟಿ ರೂ. ನೀಡಲು ಮುಂದಾದರೆ, ಗುಜರಾತ್ ಟೈಟಾನ್ಸ್ 23 ಕೋಟಿ ರೂ.ಗೆ ಬಿಡ್ಡಿಂಗ್ ನಡೆಸಿತು. ಅಂತಿಮವಾಗಿ 24.75 ಕೋಟಿ ರೂ. ನೀಡುವ ಮೂಲಕ ಮಿಚೆಲ್ ಸ್ಟಾರ್ಕ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಖರೀದಿಸಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಹರಾಜಾದ ಆಟಗಾರ ಎಂಬ ಹೆಗ್ಗಳಿಕೆಗೆ ಮಿಚೆಲ್ ಸ್ಟಾರ್ಕ್ ಪಾತ್ರರಾದರು.