ಮುಂಬೈ: ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್’ಗೆ ಮಿಥಾಲಿ ರಾಜ್ ಬುಧವಾರ ನಿವೃತ್ತಿ ಘೋಷಿಸಿದ್ದಾರೆ. ಟ್ವೀಟ್ ಮೂಲಕ ಮಾಹಿತಿ ಹಂಚಿರುವ ಮಿಥಾಲಿ, ಇಷ್ಟು ವರ್ಷಗಳ ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು, ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ 2 ನೇ ಇನ್ನಿಂಗ್ಸ್ ಅನ್ನು ಎದುರು ನೋಡುತ್ತಿದ್ದೇನೆ ಎಂದು ಬರೆದಿದ್ದಾರೆ.
“ಇಷ್ಟು ವರ್ಷಗಳ ಕಾಲ ತಂಡವನ್ನು ಮುನ್ನಡೆಸಿದ್ದು ಹೆಮ್ಮೆಯ ಸಂಗತಿ. ಇದು ಖಂಡಿತವಾಗಿಯೂ ಒಬ್ಬ ವ್ಯಕ್ತಿಯಾಗಿ ನನ್ನನ್ನು ರೂಪಿಸಿತು ಮತ್ತು ಆಶಾದಾಯಕವಾಗಿ ಭಾರತೀಯ ಮಹಿಳಾ ಕ್ರಿಕೆಟರ್ ಆಗಿ ರೂಪಿಸಲು ಸಹಾಯ ಮಾಡಿತು. ಎಂದು , ಮಿಥಾಲಿ ರಾಜ್ ಹೇಳಿದ್ದಾರೆ.