ಬಪ್ಪನಾಡು ಜಾತ್ರೋತ್ಸವ ಬ್ಯಾನರ್ ವಿವಾದದ ಹಿಂದೆ ಜಿಲ್ಲಾಡಳಿತದ ಕುಮ್ಮಕ್ಕು: ಮಿಥುನ್ ರೈ ಆರೋಪ

Prasthutha|

ಮಂಗಳೂರು: ಬಪ್ಪನಾಡು ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶವಿಲ್ಲ ಎಂದು ಹೇಳಿ ಬ್ಯಾನರ್ ಹಾಕಿರುವುದರ ಹಿಂದೆ ಜಿಲ್ಲಾಡಳಿತದ ಕುಮ್ಮಕ್ಕು ಇರುವ ಅನುಮಾನ ಕಾಡುತ್ತಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಆರೋಪಿಸಿದ್ದಾರೆ.

- Advertisement -

ಮಂಗಳೂರು ನಗರದ ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ತಾವು ಆ ಬ್ಯಾನರ್ ಹಾಕಿಲ್ಲ. ಇದಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಕ್ಷೇತ್ರದ ಆಡಳಿತ ಸಮಿತಿ ಸ್ಪಷ್ಟನೆ ನೀಡಿದ್ದರೂ ಇನ್ನೂ ಬ್ಯಾನರ್ ತೆರವುಗೊಳಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಕೂಡಾ ವೌನ ವಹಿಸಿದ್ದಾರೆ” ಎಂದು ಜಿಲ್ಲಾಡಳಿತದ ವಿರುದ್ಧ ವಾಗ್ದಾಳಿ ನಡೆಸಿದರು.

ದ.ಕ. ಜಿಲ್ಲೆಯನ್ನು ಕೋಮು ಗಲಭೆಗೆ ಪ್ರಯೋಗಶಾಲೆಯಾಗಿ ಉಪಯೋಗಿಸುವ ಕೆಲಸವನ್ನು ಮಾಡಲಾಗುತ್ತಿದ್ದು, ಪುಂಡ ಪೋಕರಿಗಳ ಕೆಲಸಕ್ಕೆ ಜಿಲ್ಲಾಡಳಿತ ಕಡಿವಾಣ ಹಾಕಬೇಕು. ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಿಥುನ್ ರೈ ಎಚ್ಚರಿಸಿದರು.



Join Whatsapp