ಮೂಲ್ಕಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿಯಾದ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣ ವಾಟ್ಸಪ್ ಗ್ರೂಪ್’ನಲ್ಲಿ ವ್ಯಕ್ತಿಯೊಬ್ಬರು ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ದೂರು ದಾಖಲಿಸಿದೆ.
ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸಪ್ ಗ್ರೂಪ್ ನಲ್ಲಿ ಮಹೇಶ್ ಮತ್ತು ಇತರರು ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈಯವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂಬ ವಿಚಾರವನ್ನೊಳಗೊಂಡ ಕೊಲೆ ಬೆದರಿಕೆ ಪೋಸ್ಟ್ ಒಂದನ್ನು ಹಾಕಲಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಈ ಪೋಸ್ಟ್ ಗಳನ್ನು ಹಾಕುತ್ತಿರುವ ವ್ಯಕ್ತಿಗಳನ್ನು ಹಾಗೂ ಹನಿ ಹಿಂದೂಸ್ತಾನಿ ಮುಂಬೈ ರವರನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕೂಡಲೇ ಮಿಥುನ್ ರೈಯವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಮುಲ್ಕಿ ಪೊಲೀಸರಿಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ.