ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎಂ.ಕೆ. ಸ್ಟಾಲಿನ್​

Prasthutha|

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರು ಇಂದು ಬೆಳಿಗ್ಗೆ ಚೆನ್ನೈನ ರಾಜಭವನದಲ್ಲಿ ರಾಜ್ಯಪಾಲ ಬನ್ವರಿಲಾಲ್​ ಪುರೋಹಿತ್​ರಿಂದ ಪ್ರಮಾಣವಚನ ಸ್ವೀಕರಿಸಿದರು.

- Advertisement -

ಇದೇ ವೇಳೆ ಸಚಿವ ಸಂಪುಟದ 34 ಸದಸ್ಯರೂ ಕೂಡ ಪ್ರಮಾಣ ವಚನವನ್ನು ಸ್ವೀಕರಿಸಿದರು. ಕೊರೋನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭ ಸರಳವಾಗಿ ಕೆಲವೇ ಗಣ್ಯರ ಸಮ್ಮುಖದಲ್ಲಿ ನಡೆಯಿತು.

ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 234 ಸ್ಥಾನಗಳಲ್ಲಿ 159 ಸ್ಥಾನಗಳನ್ನು ತನ್ನದಾಗಿಸಿಕೊಂಡ ಡಿಎಂಕೆ ಅಧಿಕಾರದ ಗದ್ದುಗೆ ಏರಿದೆ. ಏಪ್ರಿಲ್​ 26ರಂದು ನಡೆದ ಚುನಾವಣೆಯ ಫಲಿತಾಂಶ ಮೇ 2ರಂದು ಪ್ರಕಟವಾಗಿತ್ತು.

- Advertisement -

ಈ ಹಿಂದೆ ಆಡಳಿತ ನಡೆಸುತ್ತಿದ್ದ  ಎಐಎಡಿಎಂಕೆ ಕೇವಲ 75 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿದೆ. 

Join Whatsapp