ನೀಟ್ ವಿರೋಧಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಎಂ.ಕೆ.ಸ್ಟಾಲಿನ್

Prasthutha|

ಚೆನ್ನೈ: ಸಂವಿಧಾನದ ಪ್ರಕಾರ ಶಿಕ್ಷಣದ ಮೇಲಿನ ಹಕ್ಕು ರಾಜ್ಯಗಳಿಗೆ ಸೇರಿದ್ದು, ಇದನ್ನು ಮರಳಿ ಪಡೆಯಲು ಮತ್ತು ನೀಟ್ ಅನ್ನು ವಿರೋಧಿಸಲು ಸಾಮೂಹಿಕ ಬೇಡಿಕೆ ಇಡುವಂತೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ದೇಶದ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

- Advertisement -

ಹಲವು ವರ್ಷಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿರುವ ನೀಟ್ ವಿವಾದದ ಹಿನ್ನೆಲೆಯಲ್ಲಿ ಈ ಪತ್ರ ಬರೆದಿದ್ದಾರೆ. ಡಿಎಂಕೆ ಸಂಸದರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ವೈಯಕ್ತಿಕವಾಗಿ ಭೇಟಿಯಾಗಲಿದ್ದಾರೆ ಎಂದು ಸ್ಟಾಲಿನ್ ತಿಳಿಸಿದರು.

ಆಂಧ್ರಪ್ರದೇಶ, ಛತ್ತೀಸ್‌ ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರವನ್ನು ಕಳುಹಿಸಲಾಗಿದೆ. ಹಿಂದುಳಿದ ಮತ್ತು ಸಾಮಾಜಿಕವಾಗಿ ಹಿಂದುಳಿದ ಹಿನ್ನೆಲೆಯ ವಿದ್ಯಾರ್ಥಿಗಳ ಮೇಲೆ ನೀಟ್‌ ಬೀರುವ ದುಷ್ಪರಿಣಾಮದ ಬಗ್ಗೆ ಅಧ್ಯಯನ ಮಾಡಿರುವ ಎ.ಕೆ. ರಾಜನ್ ಸಮಿತಿಯ ವರದಿಯನ್ನು ಕೂಡ ಸ್ಟಾಲಿನ್ ಪತ್ರದೊಂದಿಗೆ ಲಗತ್ತಿಸಿದ್ದಾರೆ.

- Advertisement -

ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವ ಶಿಕ್ಷಣ ಕ್ಷೇತ್ರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆ ಪುನರ್ ಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನ ಮಾಡಬೇಕಾಗಿದೆ. ಈ ವಿಷಯದಲ್ಲಿ ನಿಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇನೆ ಎಂದು ಪತ್ರದಲ್ಲಿ ಸ್ಟಾಲಿನ್ ತಿಳಿಸಿದ್ದಾರೆ.

Join Whatsapp