KKRDB ಅಧ್ಯಕ್ಷರಾಗಿ ಶಾಸಕ ಅಜಯ್‌ಸಿಂಗ್ ಪದಗ್ರಹಣ

Prasthutha|

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಡಾ. ಅಜಯ್‌ಸಿಂಗ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಕಲಬುರಗಿ ನಗರದ KKRDB ಭವನದಲ್ಲಿ ಅಧಿಕಾರ ಸ್ವೀಕರಿಸಿದರು.

- Advertisement -

ಸಚಿವ ಸ್ಥಾನ ಸಿಗದೇ ಪರೋಕ್ಷವಾಗಿ ಮುನಿಸಿಕೊಂಡಿದ್ದ ಅಜಯ್‌ಸಿಂಗ್​ ಅವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಕೆಕೆಆರ್​ಡಿಬಿ ಅಧ್ಯಕ್ಷ ಸ್ಥಾನ ನೀಡಿ ಮುನಿಸು ಶಮನಕ್ಕೆ ಯತ್ನಿಸಿದೆ. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಾ.ಅಜಯಸಿಂಗ್ ಅವರನ್ನು ತಬ್ಬಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಭಾಶಯ ಕೋರಿದರು.

ಮಾಜಿ ಸಿಎಂ, ದಿವಂಗತ ಧರ್ಮಸಿಂಗ್ ಪುತ್ರ ಡಾ. ಅಜಯಸಿಂಗ್, ಜೇವರ್ಗಿ ಕ್ಷೇತ್ರದಿಂದ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಬಾರಿಸಿದ್ದಾರೆ. ಕೊನೆ ಕ್ಷಣದಲ್ಲಿ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿದ್ದರು. ಕಳೆದ ವಾರ ಕಲಬುರಗಿ ನಗರದಲ್ಲಿ ನಡೆದ ಗೃಹಜ್ಯೋತಿ ಕಾರ್ಯಕ್ರಮಕ್ಕೂ ಗೈರಾಗಿ ಅಸಮಾಧಾನ ಹೊರಹಾಕಿದ್ದರು. ಇದೀಗ ಶಾಸಕರ ಅಸಮಾಧಾನ ಹೆಚ್ಚಾದ್ರೆ ಸರ್ಕಾರಕ್ಕೆ ಆಪತ್ತು ಎನ್ನುವುದನ್ನ ಅರಿತ ಸಿಎಂ ಸಿದ್ದರಾಮಯ್ಯ, ನಾಯಕರ ಬೇಸರಕ್ಕೆ ಮದ್ದರೆಯುವ ಕೆಲಸ ಮಾಡುತ್ತಿದ್ದಾರೆ. ಈಗಾಗಿ ಅನಿವಾರ್ಯವಾಗಿ ಅಜಯ್ ಸಿಂಗ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರೊಂದಿಗೆ ಅಸಮಾಧಾನ ಶಮನಕ್ಕೆ ಮುಂದಾಗಿದ್ದಾರೆ.

- Advertisement -

11 ಜನ ಮಂಡಳಿಯ ಸದಸ್ಯರನ್ನಾಗಿ ನೇಮಕ

ಅಜಯ್ ಸಿಎಂ ಮುಂದಿನ ಒಂದು ವರ್ಷದ ಅವಧಿಗೆ ಕೆಕೆಆರ್​ಡಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನಿನ್ನೆ ಸಂಜೆ ಸಿಎಂ ಸಿದ್ದರಾಮಯ್ಯ ಸೂಚನೆಯಂತೆ, ಮಂಡಳಿಗೆ ಆಳಂದ ಶಾಸಕ ಬಿ.ಆರ್.ಪಾಟೀಲ್, ಯಲಬುರ್ಗಾ ಶಾಸಕ ಬಸವರಾಜ್ ರಾಯರೆಡ್ಡಿ, ಜೇವರ್ಗಿ ಶಾಸಕ ಡಾ. ಅಜಯಸಿಂಗ್, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ವಿಜಯನಗರ(ಹೊಸಪೇಟೆ) ಶಾಸಕ ಗವಿಯಪ್ಪ ಸೇರಿದಂತೆ ಹನ್ನೊಂದು ಜನರನ್ನು ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.



Join Whatsapp