ಶಾಸಕ ಅಖಂಡ ಶ್ರೀನಿವಾಸ್ ಸಹೋದರಿ ಗಗನ ಸುಕನ್ಯಾ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ

Prasthutha|

ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಸಹೋದರಿ ಹಾಗೂ ಕೋಲಾರ ಜಿಲ್ಲಾ ಪಂಚಾಯತ್’ನ ಕೆಡಿಪಿ ಸದಸ್ಯೆ ಗಗನ ಸುಕನ್ಯಾ ಅವರು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

- Advertisement -


ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “ಕೋಲಾರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೂ ಗಗನ ಸುಕನ್ಯಾರವರು ಜನರ ಕಷ್ಟಗಳಿಗೆ ನಿರಂತರವಾಗಿ ನೆರವಾಗುತ್ತಾ ಬಂದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ರೇಷನ್ ಕಿಟ್ ವಿತರಣೆ ನೀಡಿ ಬಡವರಿಗೆ ನೆರವಾಗಿದ್ದಾರೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದ ನೂರಾರು ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳು, ಬ್ಯಾಗ್‌ಗಳು, ನೋಟ್ ಪುಸ್ತಕಗಳನ್ನು ವಿತರಿಸಿದ್ದಾರೆ. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಗಡಿ ಭಾಗದ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ” ಎಂದು ಪರಿಚಯಿಸಿದರು.


ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, ಕೋಲಾರದ ಮಾಜಿ ಸಂಸದ ಹಾಗೂ ಎಎಪಿ ಮುಖಂಡ ಡಾ.ವೆಂಕಟೇಶ್, ಕೋಲಾರದ ಎಎಪಿ ಜಿಲ್ಲಾಧ್ಯಕ್ಷ ಸುರೇಶ್ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರದ ಎಎಪಿ ಸ್ಪರ್ಧಾಕಾಂಕ್ಷಿ ದಿಲ್ ನವಾಜ್ ಭಾಗವಹಿಸಿದ್ದರು.

Join Whatsapp