ಬೆಳಗಾವಿ: ಶಾಸಕ, ಡೆಪ್ಯುಟಿ ಸ್ಪೀಕರ್ ಹುದ್ದೆ ನಿಭಾಯಿಸುತ್ತಿದ್ದ ಆನಂದ ಮಾಮನಿ (56) ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ಕಳೆದ ಹಲವು ದಿನಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದೆರಡು ದಿನಗಳಿಂದ ಕೋಮಾ ಸ್ಥಿತಿಗೆ ತಲುಪಿದ್ದರು. ಶನಿವಾರ ರಾತ್ರಿ 12 ಗಂಟೆಯ ವೇಳೆಗೆ ಆನಂದ ಮಾಮನಿ ಕೊನೆಯುಸಿರೆಳೆದಿದ್ದಾರೆ.
ಸವದತ್ತಿ ಯಲ್ಲಮ್ಮ ಮತ ಕ್ಷೇತ್ರದಲ್ಲಿ ಸತತವಾಗಿ ಮೂರು ಬಾರಿ ಬಿಜೆಪಿ ಶಾಸಕನಾಗಿ ಆನಂದ ಮಾಮನಿ ಆಯ್ಕೆಯಾಗಿದ್ದು, ಡೆಪ್ಯುಟಿ ಸ್ಪೀಕರ್ ಹುದ್ದೆ ನಿಭಾಯಿಸುತ್ತಿದ್ದರು.