Home ಟಾಪ್ ಸುದ್ದಿಗಳು ಸುಳ್ಯ ಶಾಸಕ ಅಂಗಾರಗೆ ಸಚಿವ ಸ್ಥಾನ ಬಹುತೇಕ ಖಚಿತ | ಯಡಿಯೂರಪ್ಪರಿಂದ ಬೆಂಗಳೂರಿಗೆ ಆಹ್ವಾನ

ಸುಳ್ಯ ಶಾಸಕ ಅಂಗಾರಗೆ ಸಚಿವ ಸ್ಥಾನ ಬಹುತೇಕ ಖಚಿತ | ಯಡಿಯೂರಪ್ಪರಿಂದ ಬೆಂಗಳೂರಿಗೆ ಆಹ್ವಾನ

ಬೆಂಗಳೂರು : ಸಿಎಂ ಯಡಿಯೂರಪ್ಪ ಸರಕಾರದ ಸಚಿವ ಸಂಪುಟ ಇಂದು ವಿಸ್ತರಣೆಯಾಗಲಿದ್ದು, ಇದೇ ಮೊದಲ ಬಾರಿ ದಕ್ಷಿಣ ಕನ್ನಡದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಅಂಗಾರ ಸಚಿವರಾಗುವುದು ಬಹುತೇಕ ಖಚಿತವಾಗಿದೆ.

ಈ ಬಗ್ಗೆ ಸುದ್ದಿ ಸಂಸ್ಥೆಗಳಿಗೆ ಪ್ರತಿಕ್ರಿಯಿಸಿರುವ ಶಾಸಕ ಅಂಗಾರ, ಆರು ಬಾರಿ ಗೆಲ್ಲಿಸಿದ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘ ತಮ್ಮನ್ನು ಈ ಮಟ್ಟಕ್ಕೆ ಬೆಳೆಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸ್ವತಃ ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಯಾವುದೇ ಸಚಿವ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ. ಇಂತಹುದೇ ಸಚಿವ ಸ್ಥಾನ ಬೇಕೆಂದು ಕೇಳುವುದಿಲ್ಲ. ತಮ್ಮ ಕ್ಷೇತ್ರದ ಜನ ಮತ್ತು ಯಡಿಯೂರಪ್ಪ ಹಾಗೂ ಸಂಘಟನೆಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version