ರಾಹುಲ್ ಗಾಂಧಿ ವಿರುದ್ಧ ನಾಲಿಗೆ ಹರಿಯಬಿಟ್ಟ ಶಾಸಕ ಭರತ್ ಶೆಟ್ಟಿ: ಕಾನೂನು ಕ್ರಮ ಕೈಗೊಳ್ಳಲು ಡಿಸಿಎಂಗೆ ಇನಾಯತ್ ಅಲಿ ಮನವಿ

Prasthutha|

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿಯಾಗಿ ನಾಲಿಗೆ ಹರಿಯಬಿಟ್ಟ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಇಂದು ವಿಧಾನಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದ ನಿಯೋಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

- Advertisement -

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗಿರೀಶ್ ಆಳ್ವ, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಫೀದ್ ಅಡ್ಯಾರ್, ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್, ಮುಖಂಡರಾದ ರವಿ ಶಿಯಾನ್ ಹೊಸಬೆಟ್ಟು, ಮುಸ್ತಫಾ ಗಂಜಿಮಠ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Join Whatsapp