Home ಟಾಪ್ ಸುದ್ದಿಗಳು ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲ: ಶಾಸಕ ಭರತ್ ಶೆಟ್ಟಿ ಆರೋಪ

ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲ: ಶಾಸಕ ಭರತ್ ಶೆಟ್ಟಿ ಆರೋಪ

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರೋಡೆ ಪ್ರಕರಣದಲ್ಲಿ 100% ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದಿದ್ದಾರೆ.


ಸ್ಥಳೀಯರನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ನೈಜ ಆರೋಪಿಗಳನ್ನು ಬಯಲಿಗೆ ತನ್ನಿ ಎಂದು ಹೇಳಿದ್ದಾರೆ.


ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್ ಬಳಿ ಜ.17ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ತಮಿಳುನಾಡಿನಿಂದ ಕರೆತರಲಾಗುತ್ತಿದೆ. ಅದಕ್ಕೂ ಮೊದಲು ತಮಿಳ್ನಾಡಿನ ನ್ಯಾಯಾಲಯಕ್ಕೆ ದರೋಡೆಕೋರರನ್ನು ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version