ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನಕ್ಕೆ ಟ್ವಿಸ್ಟ್: ಕಾರ್ ಓವರ್ ಟೆಕ್ ಮಾಡುವ ವಿಚಾರದಲ್ಲಿ ಕಿರಿಕ್

Prasthutha|

- Advertisement -

ಓರ್ವನ ಬಂಧನ…!

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಮೇಲೆ ದಾಳಿಗೆ ಯತ್ನಿಸಿದ ಆರೋಪದಲ್ಲಿ ಓರ್ವನನ್ನು ಬಂಟ್ವಾಳ ಪೋಲೀಸರು ಬಂಧಿಸಿದ್ದಾರೆ.

- Advertisement -

ಮಂಗಳೂರು ಪಳ್ನೀರು ನಿವಾಸಿ ರಿಯಾಝ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ರಿಯಾಝ್ ಗೆ ಯಾವುದೇ ಪೂರ್ವ ಕ್ರಿಮಿನಲ್ ಹಿನ್ನೆಲೆ ಇಲ್ಲ .ಈ ಪ್ರಕರಣ ಹೊರತು ಪಡಿಸಿ ಈತನ ವಿರುದ್ಧ ಇವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ರಸ್ತೆಯಲ್ಲಿ ಓವರ್ ಟೆಕ್ ಮಾಡುವ ವಿಚಾರದಲ್ಲಿ ಕಿರಿಕ್ ಉಂಟಾಗಿ ಸಂಘರ್ಷಕ್ಕೆ ಕಾರಣವಾಗಿದೆ. ಆರೋಪಿಯ ಬಳಿ ಇವರೆಗೆ ಯಾವುದೇ ಆಯುಧ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಪೋಲೀಸರು ಆರೋಪಿ ಚಾಲಕ ಹಾಗೂ ಕಾರ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Join Whatsapp