‘ಲಂಚಾವತಾರ’ ಪ್ರಕರಣ | ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಮಾಡಾಳ್

Prasthutha|

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -


ಮಾಡಾಳು ವಿರೂಪಾಕ್ಷಪ್ಪ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ವಕೀಲರು ಮನವಿ ಮಾಡಿದರು. ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠವು ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ. ಟೆಂಡರ್’ಗಾಗಿ 40 ಲಕ್ಷ ರೂ ಲಂಚ ಪಡೆಯುವಾಗ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದರು.

ಬಳಿಕ ಲೋಕಾಯುಕ್ತರು, ಬೆಂಗಳೂರಿನಲ್ಲಿರುವ ಪ್ರಶಾಂತ್ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ, ಕೋಟಿ ಕೋಟಿ ಹಣ ಪತ್ತೆಯಾಗಿತ್ತು.

Join Whatsapp