ಶಾಸಕ ಮಾಡಾಳ್ ಜಾಮೀನು ಅರ್ಜಿ ವಜಾ: ಬಂಧನದ ಭೀತಿ

Prasthutha|

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು  ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ  ಆದೇಶ ನೀಡಿದೆ.

- Advertisement -

ಇದರಿಂದ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದ ಪ್ರಕರಣದ ಮೊದಲ ಆರೋಪಿ ಶಾಸಕ ವಿರೂಪಾಕ್ಷಪ್ಪ  ಬಂಧನ ಭೀತಿ ಎದುರಿಸುತ್ತಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು.

- Advertisement -

ಈ ಮಧ್ಯೆ, ಲೋಕಾಯುಕ್ತ ಪ್ರಕರಣದ ಬಗ್ಗೆ ದಾವಣಗೆರೆಯಲ್ಲಿ ಕೇಳಲಾದ ಪ್ರಶ್ನೆಗೆ ಕೈ ಮುಗಿದು ಉತ್ತರಿಸಿದ ಮಾಡಾಳ್, ನನ್ನನ್ನು ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದರು. ಲೋಕಾಯುಕ್ತ ಪ್ರಕರಣದಲ್ಲಿ ಜಾಮೀನಿನಲ್ಲಿದ್ದರೂ ಅವರು, 351 ಕೋಟಿ ವೆಚ್ಚದ ವಿವಿಧ ಕಾಮಗಾರಿ ಹಾಗೂ ಶಂಕುಸ್ಥಾಪನಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ವಿವಿಧ ಕಾಮಗಾರಿಗಳ ಉದ್ಘಾಟನೆ ‌ಮಾಡಿದರು. ಇದೀಗ ವಿವಿಧ ಫಲಾನುಭವಿಗಳಿಗೆ ಪರಿಕರಗಳ ವಿತರಣೆ ಮಾಡಲಿದ್ದಾರೆ.

Join Whatsapp