ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನ

Prasthutha|

ಬೆಂಗಳೂರು : ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ(85) ಇಂದು ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

- Advertisement -

ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಅವರು ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಸೆಪ್ಟಂಬರ್ 29, 1937 ರಂದು ಜನಿಸಿರು ಅವರು 1994 ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಶಾಸಕರಾಗಿದ್ದರು.

7 ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಉಸಿರಾಟದ ತೊಂದರೆ ಹಿನ್ನೆಲೆ 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಪೂರ್ಣ ಹೆಸರು ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ. ಪತ್ನಿ, ಓರ್ವ ಪುತ್ರಿ ನಾಲ್ವರು ಪುತ್ರರು ಸೇರಿ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

Join Whatsapp