ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೋರಿ ಶಾಸಕ ಮುನಿರತ್ನ ಪ್ರತಿಭಟನೆ

Prasthutha|

ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನ್ಯಾಯವಾಗಿ ದಕ್ಕಬೇಕಿರುವ ಅನುದಾನವನ್ನು ಡಿಕೆ ಶಿವಕುಮಾರ್ ಕೈಬಿಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಇಂದು ವಿಧಾನ ಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂದೆ ಕೂತು ಶಿವಕುಮಾರ್ ಹಾಗೂ ಅವರ ಸಹೋದರ ಹಾಗೂ ಸಂಸದ ಡಿಕೆ ಸುರೇಶ್ ವಿರುದ್ಧ ಪ್ರತಿಭಟನೆ ನಡೆಸಿದರು.

- Advertisement -

ನಿನ್ನೆ ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿ ಅನುದಾನ ಬಿಡುಗಡೆ ಮಾಡಲು ಉಪ ಮುಖ್ಯಮಂತ್ರಿಯ ಕೈಕಾಲು ಹಿಡಿಯುವುದಾಗಿ ಹೇಳಿದ್ದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಇಂದು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ ಆರ್ ಆರ್ ನಗರ ಕ್ಷೇತ್ರಕ್ಕೆ ರೂ. 126 ಕೋಟಿ ಬಿಡುಗಡೆ ಆಗಿತ್ತು. ಕ್ಷೇತ್ರದಲ್ಲಿ ಹಲವಾರು ಯೋಜನೆಗಳ ಕಾಮಗಾರಿಗಳು ನಡೆಯುತ್ತಿವೆ-ಮಲ್ಲತ್ತಹಳ್ಳಿ ಕೆರೆ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಹೈಟೆಕ್ ಶಾಲಾ ಕಟ್ಟಡಗಳ ನಿರ್ಮಾಣ ಮೊದಲಾದ ಯೋಜನೆಗಳ ಪ್ಲೇಕಾರ್ಡ್ ಗಳನ್ನು ಅವರು ಪ್ರದರ್ಶಿಸುತ್ತಿದ್ದಾರೆ. ಮುನಿರತ್ನ ಹೇಳುವ ಪ್ರಕಾರ, ಅವರ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಅನುದಾನ ಬೇರೆ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ ಎಂದು ಹೇಳಿದ್ದಾರೆ.