ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

Prasthutha|

ಬೆಂಗಳೂರು,ಆ.5: ಕೊಳ್ಳೆಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಅವರು ಕೊನೆಗೂ ಅಧಿಕೃತವಾಗಿ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಾಸಕ ಎನ್. ಮಹೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -


ಬಹುಜನ ಸಮಾಜ ಪಕ್ಷದಿಂದ ಆಯ್ಕೆಯಾಗಿದ್ದ ಮಹೇಶ್, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲಿಸಿ ಕೆಲವು ತಿಂಗಳು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರಾಗಿದ್ದರು. ಬಿಎಸ್ ಪಿಯಿಂದ ಆಯ್ಕೆಯಾಗಿದ್ದ ಎನ್. ಮಹೇಶ್ ರನ್ನು ನಂತರ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಆ ಬಳಿಕ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Join Whatsapp