ಒಂದೇ ದಿನಕ್ಕೆ ಬಿಗ್ ಬಾಸ್ ನಿಂದ ಆಚೆ ಬಂದ ಶಾಸಕ ಪ್ರದೀಪ್ ಈಶ್ವರ್: ಹೇಳಿದಿಷ್ಟು

Prasthutha|

ಬೆಂಗಳೂರು: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕನ್ನಡ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಬಿಸ್ಬಾಸ್ ಮನೆಯಲ್ಲೇ ಉಳಿಯಲಿದ್ದಾರೆ ಎನ್ನಲಾಗಿತ್ತು. ಇದರಿಂದ ಭಾರೀ ವಿವಾದಕ್ಕೆ ಕಾರಣವಾಗಿತ್ತು.

- Advertisement -


ಇನ್ನು ಈ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದು, ಬಿಗ್ಬಾಸ್ ಸ್ಪರ್ಧಾಳುಗಳಿಗೆ ಮೋಟಿವೇಷನ್ ಮಾಡಲು ಕರೆದಿದ್ದರು. ಹೀಗಾಗಿ ರಿಯಾಲಿಟಿ ಶೋ ಅತಿಥಿಯಾಗಿ 3 ತಾಸು ಮಾತ್ರ ನಾನು ಒಳಹೋಗಿದ್ದೆ. ಆಯೋಜಕರ ಆಹ್ವಾನದ ಮೇರೆಗೆ ಹೋಗಿ ಬಂದಿದ್ದೇನೆ. ರಾಜ್ಯದ ಯುವಕರಿಗೆ ಅನುಕೂಲವಾಗಲಿ ಎಂದು ಭಾವಿಸಿ ಹೋಗಿದ್ದೇನೆ. ಕೆಲವರು ನನ್ನನ್ನು ಟೀಕೆ ಮಾಡುತ್ತಿದ್ದಾರೆ, ಅದು ಅವರ ಅಭಿಪ್ರಾಯ ಎಂದು ಟಾಂಗ್ ಕೊಟ್ಟರು.

Join Whatsapp