ಬೆಂಗಳೂರು: ವಿಧಾನಸಭಾ ಚುನಾವಣಾಯಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿಯೂ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯನ್ನು ಪ್ರವೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಕಂಡು ಸ್ಪರ್ಧಿಗಳು ಅಚ್ಚರಿ ವ್ಯಕ್ತ ಪಡಿಸಿದರು. ತುಕಾಲಿ ಸಂತು, ‘ನಾವು ಒಬ್ಬ ಎಂ.ಎಲ್.ಎ ಜೊತೆ ಸ್ಪರ್ಧೆ ಮಾಡಬೇಕು’ ಎಂದು ಮಾತನಾಡಿದರೆ, ಅದಕ್ಕೆ ಪ್ರದೀಪ್, ‘ನಾವು ಸೋಲಬೇಕು ಅಂತಾನೆ ಬೆಂಗಳೂರಿಗೆ ಬಂದವನು’ ಎಂದು ಉತ್ತರಿಸಿದ್ದಾರೆ. ಪ್ರದೀಪ್ ಈಶ್ವರ್ ಮನೆಗೆ ಬಂದಿರುವುದು ಹೊಸ ಕಳೆ ಬಂದಂತಾಗಿದೆ. ಒಬ್ಬ ಜನಪ್ರತಿನಿಧಿ ಎಷ್ಟು ದಿನ ಆ ಮನೆಯಲ್ಲಿ ಉಳಿಯಬಹುದು ಎನ್ನುವುದೇ ಅಚ್ಚರಿ.
ಅಧಿಕೃತವಾಗಿ ನಿನ್ನೆ ಬಿಗ್ ಬಾಸ್ ಕನ್ನಡ 10ನೇ ಸೀಸನ್ ಗೆ ಚಾಲನೆ ಸಿಕ್ಕಿದ್ದು, ಎಲ್ಲ ಸ್ಪರ್ಧಿಗಳನ್ನು ಸುದೀಪ್ ಶನಿವಾರವೇ ಬಿಗ್ ಬಾಸ್ ಮನೆಗೆ ಕಳುಹಿಸಿದ್ದರೆ, ಒಂದು ದಿನ ತಡವಾಗಿ ಪ್ರದೀಪ್ ದೊಡ್ಮನೆ ಪ್ರವೇಶ ಮಾಡಿದ್ದಾರೆ. ಡೊಳ್ಳು ಕುಣಿತ ಮೂಲಕ ಅವರನ್ನು ಬಿಗ್ ಬಾಸ್ ಮನೆಗೆ ಸ್ವಾಗತ ನೀಡಿದ್ದಾರೆ.