ಉಪ ಸಭಾಪತಿಯಾಗಲು ಶಾಸಕ ಪುಟ್ಟರಂಗಶೆಟ್ಟಿ ಕೊನೆಗೂ ಒಪ್ಪಿಗೆ

Prasthutha|

ಚಾಮರಾಜನಗರ: ಉಪ ಸಭಾಪತಿಯಾಗಲು ಶಾಸಕ ಪುಟ್ಟರಂಗಶೆಟ್ಟಿ ಕೊನೆಗೂ ಒಪ್ಪಿಗೆ ನೀಡಿದ್ದಾರೆ.

- Advertisement -


ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಗೆ ಉಪ ಸಭಾಪತಿ ಸ್ಥಾನ ನೀಡಲಾಗಿತ್ತು. ಈ ವೇಳೆ ನನಗೆ ನಿಭಾಯಿಸಲು ಕಷ್ಟವಾಗುತ್ತೆ, ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲ್ಲ ಎಂದು ಪುಟ್ಟರಂಗಶೆಟ್ಟಿ ತಿಳಿಸಿದ್ದರು.

ಈ ಬಗ್ಗೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ನಾನು ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಂಡಿದ್ದೇನೆ. ಒಂದು ವರ್ಷದ ನಂತರ ಕಾಂಗ್ರೆಸ್ ವರಿಷ್ಠರು ಸಚಿವ ಸ್ಥಾನ ಕೊಡುವ ಬಗ್ಗೆ ಮಾತು ಕೊಟ್ಟಿದ್ದಾರೆ. ಹೀಗಾಗಿ ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ

Join Whatsapp