Home ಟಾಪ್ ಸುದ್ದಿಗಳು ಉಪ ಸಭಾಪತಿಯಾಗಲು ಶಾಸಕ ಪುಟ್ಟರಂಗಶೆಟ್ಟಿ ಕೊನೆಗೂ ಒಪ್ಪಿಗೆ

ಉಪ ಸಭಾಪತಿಯಾಗಲು ಶಾಸಕ ಪುಟ್ಟರಂಗಶೆಟ್ಟಿ ಕೊನೆಗೂ ಒಪ್ಪಿಗೆ

ಚಾಮರಾಜನಗರ: ಉಪ ಸಭಾಪತಿಯಾಗಲು ಶಾಸಕ ಪುಟ್ಟರಂಗಶೆಟ್ಟಿ ಕೊನೆಗೂ ಒಪ್ಪಿಗೆ ನೀಡಿದ್ದಾರೆ.


ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಗೆ ಉಪ ಸಭಾಪತಿ ಸ್ಥಾನ ನೀಡಲಾಗಿತ್ತು. ಈ ವೇಳೆ ನನಗೆ ನಿಭಾಯಿಸಲು ಕಷ್ಟವಾಗುತ್ತೆ, ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲ್ಲ ಎಂದು ಪುಟ್ಟರಂಗಶೆಟ್ಟಿ ತಿಳಿಸಿದ್ದರು.

ಈ ಬಗ್ಗೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ನಾನು ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಂಡಿದ್ದೇನೆ. ಒಂದು ವರ್ಷದ ನಂತರ ಕಾಂಗ್ರೆಸ್ ವರಿಷ್ಠರು ಸಚಿವ ಸ್ಥಾನ ಕೊಡುವ ಬಗ್ಗೆ ಮಾತು ಕೊಟ್ಟಿದ್ದಾರೆ. ಹೀಗಾಗಿ ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ

Join Whatsapp
Exit mobile version