ಮುಂಬೈ: ಮುಂಬೈನ ಶಾಸಕರ ವಸತಿಗೃಹದಲ್ಲಿರುವ ಕ್ಯಾಂಟೀನ್ನಲ್ಲಿ ಹಳಸಿದ ದಾಲ್ ನೀಡಿರುವ ಆರೋಪದ ಮೇಲೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಕ್ಯಾಂಟೀನ್ ಪರವಾನಗಿ ರದ್ದುಗೊಳಿಸಿದೆ.
ಮಹಾರಾಷ್ಟ್ರ ವಿಧಾನಸಭಾ ಅಧಿವೇಶನದ ನಿಮಿತ್ತ ಶಾಸಕರೆಲ್ಲರೂ ಮುಂಬೈಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಕೂಡ ಎಂಎಲ್ಎ ಗೆಸ್ಟ್ಹೌಸ್ನಲ್ಲಿ ತಂಗಿದ್ದರು.
ಆ ಸಮಯದಲ್ಲಿ ಊಟಕ್ಕೆಂದು ಕ್ಯಾಂಟೀನ್ಗೆ ಹೋಗಿದ್ದರು. ಅಲ್ಲಿ ಹಳಸಿದ್ದ ದಾಲ್ ನೀಡಿದ್ದರು. ಅದಕ್ಕೆ ಆಕ್ರೋಶಗೊಂಡ ಶಾಸಕರು ಕ್ಯಾಂಟೀನ್ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದರು. ಹಾಗೆಯೇ ಕ್ಯಾಂಟೀನ್ ಆಹಾರದ ಬಗ್ಗೆ ಕಳವಳ ವ್ಯಕ್ತಪಡಿಸಿ ದೂರು ನೀಡಿದ್ದರು.
ಎಫ್ಡಿಎ ತುರ್ತು ಕ್ರಮ ಕೈಗೊಂಡಿದೆ. ಅಜಂತಾ ಕ್ಯಾಟರರ್ಸ್ ಅನ್ನು ಅಮಾನತು ಮಾಡಲಾಗಿದೆ. ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006 ರ ಪ್ರಮುಖ ನಿಬಂಧನೆಗಳನ್ನು ಮತ್ತು ಆಹಾರ ಸುರಕ್ಷತೆ ಮತ್ತು ಮಾನದಂಡಗಳ (ಆಹಾರ ವ್ಯವಹಾರಗಳ ಪರವಾನಗಿ ಮತ್ತು ನೋಂದಣಿ) ನಿಯಮಗಳು, 2011 ಅನ್ನು ಉಲ್ಲಂಘಿಸಿದೆ ಎಂದು ಹೇಳಿದೆ.