Home ಟಾಪ್ ಸುದ್ದಿಗಳು ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ ₹11 ಲಕ್ಷ ನೀಡುವುದಾಗಿ ಘೋಷಿಸಿದ ಶಾಸಕ ಸಂಜಯ್ ಗಾಯಕ್ವಾಡ್

ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ ₹11 ಲಕ್ಷ ನೀಡುವುದಾಗಿ ಘೋಷಿಸಿದ ಶಾಸಕ ಸಂಜಯ್ ಗಾಯಕ್ವಾಡ್

ದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು “ಕತ್ತರಿಸಿದ”ವರಿಗೆ ₹ 11 ಲಕ್ಷ ನೀಡುವುದಾಗಿ ಶಿವಸೇನಾ (ಶಿಂಧೆ ಬಣ) ಶಾಸಕ ಸಂಜಯ್ ಗಾಯಕ್ವಾಡ್ ಹೇಳಿದ್ದಾರೆ.

ಮೀಸಲು ವ್ಯವಸ್ಥೆಯನ್ನು ರದ್ದುಪಡಿಸುವ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಗಳ ಬಗ್ಗೆ ಗಾಯಕ್ವಾಡ್ ಈ ರೀತಿ ಹೇಳಿದರು.

ರಾಹುಲ್ ಗಾಂಧಿ ಅವರು ವಿದೇಶದಲ್ಲಿದ್ದಾಗ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಮುಗಿಸಲು ಬಯಸುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್‌ನ ನಿಜವಾದ ಮುಖವನ್ನು ಬಯಲು ಮಾಡಿದೆ.ಇತ್ತೀಚಿನ ಅಮೆರಿಕ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಮೀಸಲಾತಿಯನ್ನು ಕೊನೆಗೊಳಿಸುವ ಕುರಿತು ಮಾತನಾಡಿದ್ದರು. ಇದು ಮೀಸಲಾತಿಯನ್ನು ಅಂತರ್ಗತವಾಗಿ ವಿರೋಧಿಸುವ ಮನಸ್ಥಿತಿಯನ್ನು ತೋರಿಸುತ್ತದೆ. ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸುವವರಿಗೆ ₹11 ಲಕ್ಷ ಬಹುಮಾನ ನೀಡುತ್ತೇನೆ ಎಂದು ಗಾಯಕ್ವಾಡ್ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ವಿಡಿಯೊದಲ್ಲಿದೆ.

ಗಾಯಕ್ವಾಡ್ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ
ರಾಹುಲ್ ಗಾಂಧಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಗಾಯಕ್ವಾಡ್ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಅವರು ಶಿವಸೇನಾ ಶಾಸಕರ ಹೇಳಿಕೆಯನ್ನು “ಅಸಂಬದ್ಧ” ಎಂದಿದ್ದು ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

“ಇಂತಹ ಟೀಕೆಗಳನ್ನು ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಇಲ್ಲದಿದ್ದರೆ, ಮಹಾರಾಷ್ಟ್ರದ ಸಾರ್ವಜನಿಕರು ಮುಂದಿನ ದಿನಗಳಲ್ಲಿ ನಿಮ್ಮ ಸ್ಥಾನವನ್ನು ತೋರಿಸುತ್ತಾರೆ” ಎಂದಿದ್ದಾರೆ ವಡೆತ್ತಿವಾರ್.

Join Whatsapp
Exit mobile version