ಬೆಂಗಳೂರು: ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಬಿಜೆಪಿಯಲ್ಲಿ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋಮಶೇಖರ್ ಕಾಲು ಹೊರಗಡೆ ಹಾಕಿದ್ದಾರೆ. ಅವರು ಕಾಂಗ್ರೆಸ್ನವರ ಸಂಪರ್ಕದಲ್ಲಿ ಇದ್ದಾರೆ. ಅವರ ವಿರುದ್ಧ ಬಿಜೆಪಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಸೋಮಶೇಖರ್ ಮತ ಹಾಕಿದ್ದಾರೆ. ಅವರು ಆಗಲೇ ಬಿಜೆಪಿಯಿಂದ ಕಾಲು ಹೊರಗಿಟ್ಟಿದ್ದರು ಎಂದು ಅಶೋಕ್ ಹೇಳಿದ್ದಾರೆ.