ಶಾಸಕ ಸುನಿಲ್ ಕುಮಾರ್ ಏಕಾಂಗಿ ಪ್ರತಿಭಟನೆ: ಪೊಲೀಸ್ ವಶಕ್ಕೆ

Prasthutha|

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಇಲ್ಲಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

‘ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರ ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Whatsapp