ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉದಯಗಿರಿಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಜ್ವರ ಹಾಗೂ ಎದೆ ನೋವು ಕಾಣಿಸಿಕೊಂಡಿದ್ದು, ಇದರ ಬೆನ್ನಲ್ಲೇ ಅವರನ್ನು ರಿಂಗ್ ರಸ್ತೆಯಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ.
ಸದ್ಯ ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.