ಮಂಗಳೂರು: ಬಸ್ಸಿನಲ್ಲಿ ಹೋಗುತ್ತಿದ್ದಾಗ ಮುಸ್ಲಿಮ್ ವ್ಯಕ್ತಿಯೊಬ್ಬರಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಕೂಲಿ ಕಾರ್ಮಿಕ ಇಸಾಕ್ ಅವರನ್ನು ಶಾಸಕ, ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಅವರು ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿದ್ದು, ತಕ್ಷಣ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.