Home ಕರಾವಳಿ ಶಾಸಕ ಯಶ್ಪಾಲ್ ಸುವರ್ಣ ಸೇಡಿನ ರಾಜಕೀಯ ಉಡುಪಿಗೆ ಶೋಭೆ ತರುವುದಿಲ್ಲ: ರಘುಪತಿ ಭಟ್

ಶಾಸಕ ಯಶ್ಪಾಲ್ ಸುವರ್ಣ ಸೇಡಿನ ರಾಜಕೀಯ ಉಡುಪಿಗೆ ಶೋಭೆ ತರುವುದಿಲ್ಲ: ರಘುಪತಿ ಭಟ್

ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ಅವರ ಸೇಡಿನ ರಾಜಕೀಯ ಉಡುಪಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಶಾಸಕರಾಗಿದ್ದ ಯು.ಆರ್.ಸಭಾಪತಿ, ಪ್ರಮೋದ್ ಮಧ್ವರಾಜ್ ಅವರನ್ನು ಎದುರಿಸಿಕೊಂಡು ಬಂದಿದ್ದೇನೆ. ನಾವೆಲ್ಲ ರಾಜಕೀಯವಾಗಿ ಜಗಳ ಮಾಡುತ್ತಿದ್ದೇವು. ಆದರೆ ನಾವು ಯಾರೂ ವೈಯಕ್ತಿಕವಾಗಿ ನಿಂದನೆ ಹಾಗೂ ವ್ಯವಹಾರಕ್ಕೆ ತೊಂದರೆ ಮಾಡುತ್ತಿರಲಿಲ್ಲ ಎಂದು ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.

ಯಶ್ಪಾಲ್ ಸುವರ್ಣರ ಬೆಳವಣಿಗೆಯಲ್ಲಿ ನನ್ನ ಪಾತ್ರ ಸಾಕಷ್ಟಿದೆ ಎಂಬುದು ಉಡುಪಿ ಜನತೆಗೆ ತಿಳಿದಿದೆ. 2004ರಲ್ಲಿ ನಾನು ಚುನಾವಣೆ ಸ್ಪರ್ಧಿಸಿದಾಗ ಬಂಡಾಯ ಅಭ್ಯರ್ಥಿ ಸುಧಾಕರ ಶೆಟ್ಟಿ ಬೆಂಬಲಿಗರಾಗಿದ್ದ ಯಶ್ಪಾಲ್ ಸುವರ್ಣರನ್ನು ನಗರಸಭೆ ಸದಸ್ಯನಾಗಿ ನಾಮನಿರ್ದೇಶನ ಮಾಡಿದೆ. ಎರಡು ಬಾರಿ ನಗರಸಭೆ ಸದಸ್ಯನಾಗಿ ಚುನಾವಣೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟೆ. ಅವರನ್ನು ಮೀನು ಮಾರಾಟ ಫೆಡರೇಶನ್ ಗೆ ನಾಮನಿರ್ದೇಶನ ಮಾಡಿ ಅಧ್ಯಕ್ಷರನ್ನಾಗಿ ಮಾಡಿರುವುದು ನಾನು. ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷ ಮಾಡಿದ್ದೆ. ಅವರ ಮೇಲೆ ವಿಶ್ವಾಸ ಇಟ್ಟುಕೊಂಡು ಪ್ರೀತಿಯಿಂದ ಬೆಳೆಸಿದ್ದೆ. ಅವರು ಎಂಎಲ್ಎ ಚುನಾವಣೆ ಸ್ಪರ್ಧಿಸಿದಾಗ 40ದಿನಗಳ ಕಾಲ ಅವರೊಂದಿಗೆ ಕೆಲಸ ಮಾಡಿದ್ದೆ ಎಂದು ಅವರು ತಿಳಿಸಿದರು.

Join Whatsapp
Exit mobile version