ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರಕ್ಕೆ ಚುನಾವಣೆ ಆರಂಭ

Prasthutha: December 10, 2021

ಮಂಗಳೂರು ಮನಪಾ ಕಚೇರಿಯಲ್ಲಿ ಮತದಾನಕ್ಕೆ ಅವಕಾಶ

ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರಕ್ಕೆ ಚುನಾವಣೆ ಇಂದು ಆರಂಭವಾಗಿದೆ. ದ.ಕ,ಉಡುಪಿ‌ ದ್ವಿಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೇಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೇಸ್ ಎಸ್ ಡಿಪಿಐ ನ ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೇಸ್ ನ ಮಂಜುನಾಥ ಭಂಡಾರಿ ಹಾಗೂ ಎಸ್ ಡಿಪಿಐ ನ ಶಾಫಿ.ಕೆ ಕಣದಲ್ಲಿಇದ್ದಾರೆ.

ಒಟ್ಟು 389 ಮತಗಟ್ಟೆಗಳಲ್ಲಿ‌ ಮತದಾನ ನಡೆಯಲಿದ್ದು, ದ.ಕ,ಉಡುಪಿ ಜಿಲ್ಲೆಯಲ್ಲಿ ಒಟ್ಟು 6,040 ಮತದಾರರು ಹೊಂದಿದ್ದಾರೆ.

ರಾಜ್ಯ ವಿಧಾನ ಪರಷತ್ ಚುನಾವಣೆಯ ಹಿನ್ನೆಲೆಯಲ್ಲಿ, ಮಂಗಳೂರು ಮನಪಾ ಕಚೇರಿಯಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ ೮ ರಿಂದ‌ ಸಂಜೆ ೪ ರವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮನಪಾ ಸದಸ್ಯರಾದ  ಎಸಿ ವಿನಯ್ ರಾಜ್  ಮೊದಲ‌ ಮತ ಚಲಾವಣೆ ನಡೆಸಿದ್ದು, ಒಟ್ಟು ಮನಪಾದಲ್ಲಿ  ೬೦ ಸದಸ್ಯರಿಂದ ಮತದಾನ ನಡೆಯಲಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!