ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ | ನಾಲ್ಕನೇ ಬಾರಿ ಪುಟ್ಟಣ್ಣ ಆಯ್ಕೆ

Prasthutha|

ಬೆಂಗಳೂರು : ರಾಜ್ಯದ ಎರಡು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗುತ್ತಿರುವಾಗಲೇ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಪುಟ್ಟಣ್ಣ ನಾಲ್ಕನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿದ್ದಾರೆ. 2,200 ಮತಗಳ ಅಂತರದಿಂದ ಅವರು ಗೆಲುವು ಸಾಧಿಸಿದ್ದಾರೆ.

- Advertisement -

ಈ ಹಿಂದೆ ಮೂರು ಬಾರಿ ಪುಟ್ಟಣ್ಣ ಜೆಡಿಎಸ್ ನಿಂದ ಆಯ್ಕೆಯಾಗಿದ್ದರು. ಚುನಾವಣಾ ಆಯೋಗ ಅಧಿಕೃತ ಘೋಷಣೆ ಇನ್ನಷ್ಟೇ ಮಾಡಬೇಕಿದೆ.

- Advertisement -