MNS, NCP ಕಾರ್ಯಕರ್ತರಿಂದ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಿಭಟನೆ

Prasthutha|

ಮುಂಬೈ: ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮಗಳು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿರುವುದರಿಂದ ಈ ಗ್ರಾಮಗಳನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸುವ ನಿರ್ಣಯಗಳನ್ನು ಅವುಗಳು ಅಂಗೀಕರಿಸಿವೆ ಎಂದು ಹೇಳಿಕೆ ನೀಡಿದ್ದ ಸಿಎಂ ಬೊಮ್ಮಾಯಿ ವಿರುದ್ಧ ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS), ರಾಷ್ಟ್ರೀಯವಾದಿ  ಕಾಂಗ್ರೆಸ್ ಪಕ್ಷ(NCP) ಕಾರ್ಯಕರ್ತರು ಸೋಲಾಪುರದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲ್ಲೂಕಿನ ಪಂಚಾಯತ್’ಗಳು ಈ ಹಿಂದೆ ತೀವ್ರ ಬರ ಪರಿಸ್ಥಿತಿ ಮತ್ತು ತೀವ್ರ ಕುಡಿಯುವ ನೀರಿನ ಬಿಕ್ಕಟ್ಟಿನ ಸಮಯದಲ್ಲಿ ಕರ್ನಾಟಕದೊಂದಿಗೆ ವಿಲೀನಗೊಳ್ಳುವ ನಿರ್ಣಯವನ್ನು ಅಂಗೀಕರಿಸಿವೆ. ತಮ್ಮ ಸರ್ಕಾರವು ನೀರನ್ನು ಒದಗಿಸುವ ಮೂಲಕ ಅವರಿಗೆ ಸಹಾಯ ಮಾಡಲು ಯೋಜನೆಗಳನ್ನು ರೂಪಿಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಎಮ್ ಎನ್ ಎಸ್ , ಎನ್ ಸಿಪಿ ಕಾರ್ಯಕರ್ತರು ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದಾರೆ.

Join Whatsapp