ಮಾತನಾಡುತ್ತಿದ್ದಾಗ ಮೊಬೈಲ್ ಬ್ಲಾಸ್ಟ್: ಪ್ರಾಣಾಪಾಯದಿಂದ ಯುವಕ ಪಾರು

Prasthutha|

ಬಳ್ಳಾರಿ: ಮಾತನಾಡುತ್ತಿದ್ದಾಗ ಮೊಬೈಲ್ ಬ್ಲಾಸ್ಟ್ ಆಗಿ ಯುವಕನೋರ್ವ ಪ್ರಾಣಾಪಾಯದಿಂದ ಪಾರಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು, ಗೆದ್ಲಗಟ್ಟೆ ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ಯುವಕ ಪವನ್ ಮನೆಯಲ್ಲಿ ಆಪ್ತರಿಗೆ ಕರೆ ಮಾಡಿ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಮೊಬೈಲ್ ಬ್ಲಾಸ್ಟ್ ಆಗಿದೆ.

ಸ್ಫೋಟಗೊಂಡ ಪರಿಣಾಮ ಪವನ್ ಅವರ ಮುಖ ಮತ್ತು ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ.

Join Whatsapp