ಸೂರತ್: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಮೊಬೈಲ್ ಫೋನ್ ಕಾರಣ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಂಘವಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ತಂದೆಯಿಂದಲೇ ಅತ್ಯಾಚಾರಕ್ಕೆ ಒಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಮೊಬೈಲ್ ಫೋನ್ ಮೊದಲ ಕಾರಣವಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.
ಸೂರತ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಚಿವ ಹರ್ಷ್ ಸಂಘವಿ, ʼಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಾಗ ನಾವು ನಮ್ಮ ಕಾನೂನನ್ನು ದೂರುತ್ತೇವೆ. ಆದರೆ ಇತ್ತೀಚಿನ ಸರ್ವೇಗಳ ಪ್ರಕಾರ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಜನರ ವಿಕೃತ ಮನಸ್ಥಿತಿ ಮತ್ತು ಮೊಬೈಲ್ ಫೋನ್ಗಳು ನೇರ ಕಾರಣವಾಗಿದೆ. ಮೊಬೈಲ್ ಫೋನ್ಗಳಲ್ಲಿ ಅಶ್ಲೀಲ ತಾಣಗಳಿಗೆ ಸುಲಭವಾಗಿ ತಲುಪಬಹುದಾಗಿದ್ದು, ಇದು ಅತ್ಯಾಚಾರಕ್ಕೆ ಪ್ರೇರಣೆ ನೀಡುತ್ತದೆ ಎಂದು ಸಚಿವರು ಹೇಳಿದ್ದಾರೆ.
ಭಾರತದಲ್ಲಿ ಅತ್ಯಾಚಾರ ಪ್ರಕರಣಗಳಲ್ಲಿ, ಅದರಲ್ಲೂ ಯುವತಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತೆಯ ಕುಟುಂಬಸ್ಥರು ಮತ್ತು ಅಕ್ಕಪಕ್ಕದ ಮನೆಯವರೇ ಹೆಚ್ಚಿನ ಅಪರಾಧಿಗಳಾಗಿರುತ್ತಾರೆ ಎಂದು ಸಚಿವರು ವಿಚಿತ್ರ ಹೇಳಿಕೆ ನೀಡಿದ್ದಾರೆ.