ದೆಹಲಿ: ಯುವತಿಯನ್ನು ಜನನಿಬಿಡ ರಸ್ತೆಯಲ್ಲಿ ಎಳೆದೊಯ್ದ ಮೊಬೈಲ್ ಕಳ್ಳರು

Prasthutha: December 17, 2021

ದೆಹಲಿ: ಮೊಬೈಲ್ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ ಕಳ್ಳರನ್ನು ಹಿಡಿದ ಯುವತಿಯನ್ನು ಕಳ್ಳರು ಮುಖ್ಯರಸ್ತೆಯಲ್ಲೇ ಎಳೆದೊಯ್ದ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ಫೋರ್ಟಿಸ್ ಆಸ್ಪತ್ರೆಯ ಸಿಬ್ಬಂದಿ 23 ವರ್ಷದ ಪಾಯಲ್ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಶಾಲಿಮಾರ್ ಬಾಗ್ ಪ್ರದೇಶದಲ್ಲಿ ಬೈಕ್’ನಲ್ಲಿ ಬಂದ ಕಳ್ಳರು ಆಕೆಯ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಧೈರ್ಯ ಕಳೆದುಕೊಳ್ಳದ ಪಾಯಲ್, ಕಳ್ಳನ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಳು. ಇದರಂದ ವಿಚಲಿತರಾದ ಕಳ್ಳರು ವೇಗವಾಗಿ ಬೈಕ್ ಚಲಾಯಿಸಿದ್ದಾರೆ. ಈ ವೇಳೆ ಪಾಯಲ್’ರನ್ನು ನಡುರಸ್ತೆಯಲ್ಲೇ ಎಳೆದೊಯ್ದಿದ್ದಾರೆ. ಘಟನೆಯು ಸಿಸಿಟಿವಿಯಲ್ಲಿ ದಾಖಲಾಗಿದ್ದು ಬೆಚ್ಚಿ ಬೀಳಿಸುವಂತಿದೆ.

ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಚುರುಕಾದ ಪೊಲೀಸರು CCTV ದೃಶ್ಯಾವಳಿಗಳನ್ನು ಪರಿಶೀಲಿಸಿ ಕಾರ್ಯಾಚರಣೆ ನಡೆಸಿದ್ದು, ಸ್ಕೂಟಿ ಸಮೇತ ಓರ್ವ ದರೋಡೆಕೋರ ವಿಪಿನ್ (21) ನನ್ನು ಬಂಧಿಸಿದ್ದು, ಸ್ಕೂಟಿ ಚಲಾಯಿಸುತ್ತಿದ್ದವನಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ ಎಂದು ದೆಹಲಿ ವಾಯವ್ಯ ವಿಭಾಗದ DCP ಉಷಾ ರಂಗ್ನಾನಿ PTI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!