ಉಳ್ಳಾಲ : ಮಾಡೆಲಿಂಗ್ ಆಸಕ್ತಿ ಹೊಂದಿದ್ದ ಯುವತಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ !

Prasthutha: March 10, 2021

► ಮನೆಗೆ ಬಂದ ಮೂವರು ಆಗಂತುಕರ ಮೇಲೆ ಸ್ಥಳೀಯರ ಸಂಶಯ ?

ಉಳ್ಳಾಲ: ಮಾಡೆಲಿಂಗ್ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಸಮೀಪದ ಉಳ್ಳಾಲದ ಕುಂಪಲದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಯುವತಿಯನ್ನು ಪ್ರೇಕ್ಷಾ ( 17) ಎಂದು ಗುರುತಿಸಲಾಗಿದೆ.  ಕುಂಪಲ ಆಶ್ರಯ ಕಾಲನಿಯ ನಿವಾಸಿಯಾಗಿರುವ ಪ್ರೇಕ್ಷಾ ನಗರದ ನಂತೂರು ಬಳಿಯ ನಿಟ್ಟೆ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದರು ಎನ್ನಲಾಗಿದೆ. ಇಂದು ಮಾಡೆಲಿಂಗ್ ಗೆ ಸಂಬಂಧಪಟ್ಟ ಫೋಟೋಶೂಟ್ ಗಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದಳು ಎಂದು ತಿಳಿದು ಬಂದಿದೆ.

ಬೆಂಗಳೂರಿಗೆ ತರಳಲು ಬೇಕಾಗಿ ಕಾಲೇಜಿನಿಂದ ರಜೆ ಪಡೆದು ಮನೆಗೆ ಬಂದಿದ್ದ ಪ್ರೇಕ್ಷಾ ಏಕಾ ಏಕಿ ಆತ್ಮಹತ್ಯೆಯ ನಿರ್ಧಾರ ಯಾಕೆ ತೆಗೆದುಕೊಂಡಳು ಎಂದು ಪೋಷಕರಿಗೂ ಸ್ಥಳೀಯರಿಗೂ ತಿಳಿಯದಾಗಿದೆ. ತಾಯಿ ಅಂಗನವಾಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಮದ್ಯಾಹ್ನದ ಊಟಕ್ಕೆಂದು ಮನೆಗೆ ಬಂದಾಗ ಮಗಳು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಆ ಮೂವರು ಆಗಂತುಕರು ಯಾರು ?

ಇದೇ ವೇಳೆ ಪ್ರೇಕ್ಷಾರ ಮನೆಗೆ ಮೂವರು ಇಂದು ಬಂದಿದ್ದರು ಎಂದು ಸ್ಥಳೀಯರು ತಿಳಿಸಿದ್ದು, ಅವರು ಯಾರು ಎಂದು ಇನ್ನಷ್ಟೇ ತಿಳಿಯಬೇಕಾಗಿದೆ. ಸ್ಥಳೀಯರು ಇದು ಆತ್ಮಹತ್ಯೆಯಲ್ಲ, ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ.  ಮಾತ್ರವಲ್ಲ ಮೃತದೇಹ ಬೆಡ್ಡಿನಲ್ಲಿ ನಿಂತ ಸ್ಥಿತಿಯಲ್ಲೇ ಇದ್ದು, ಆತ್ಮಹತ್ಯೆಯಂತೆ ಕಾಣುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!