ಲಖನೌ: ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಫೋಟಿಸಿ ಹತ್ಯೆ ಮಾಡುವುದಾಗಿ ಟ್ವಿಟ್ಟರ್ ನಲ್ಲಿ ಬೆದರಿಕೆ ಹಾಕಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಡಿಸಿಪಿ ಪ್ರಮೋದ್ ಕುಮಾರ್ ತಿವಾರಿ, ದೀಪಕ್ ಶರ್ಮಾ ಎಂಬ ಟ್ವಿಟರ್ ಖಾತೆಯಿಂದ ಬೆದರಿಕೆ ಹಾಕಲಾಗಿದೆ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ. ಈ ಸಂಬಂಧ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಪರಾಧ ವಿಭಾಗ ಮತ್ತು ಐಟಿ ಸೆಲ್ ತಂಡಗಳು ಪ್ರಕರಣದ ತನಿಖೆ ನಡೆಸುತ್ತಿವೆ. ದೀಪಕ್ ಹೆಸರಿನ ಖಾತೆಯ ಬಗ್ಗೆ ಟ್ವಿಟರ್ ಕಂಪನಿಯಿಂದ ಮಾಹಿತಿ ಕೇಳಲಾಗಿದೆ. ಖಾತೆಯು ರಚಿಸಿದ ಅದೇ ಹೆಸರಿಗೆ ಸೇರಿದೆಯೇ ಅಥವಾ ನಕಲಿ ಐಡಿಯೇ ಎಂಬುದು ತನಿಖೆಯಲ್ಲಿ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.