Home ಟಾಪ್ ಸುದ್ದಿಗಳು ಇಂದು ರಾಜ್ಯಕ್ಕೆ ಮತ್ತೊಮ್ಮೆ ಮೋದಿ: ಚೊಂಬಿನ ಮೂಲಕ ಸ್ವಾಗತಿಸಲು ಕಾಂಗ್ರೆಸ್ ಸಜ್ಜು

ಇಂದು ರಾಜ್ಯಕ್ಕೆ ಮತ್ತೊಮ್ಮೆ ಮೋದಿ: ಚೊಂಬಿನ ಮೂಲಕ ಸ್ವಾಗತಿಸಲು ಕಾಂಗ್ರೆಸ್ ಸಜ್ಜು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಭೇಟಿ ನೀಡಲಿದ್ದು, ಚೊಂಬಿನ ಮೂಲಕ ಪ್ರಧಾನಿಯನ್ನು ಸ್ವಾಗತಿಸಲು ಕಾಂಗ್ರೆಸ್‌ ಸಜ್ಜಾಗಿದೆ. ಈ ನಡೆಯ ವಿರುದ್ಧ ಬಿಜೆಪಿ ಕಿಡಿಗಾರಿದೆ.

ಇಂದು ಚುನಾವಣ ಪ್ರಚಾರಕ್ಕಾಗಿ‌ ರಾಜ್ಯಕ್ಕೆ ಆಗಮಿಸಲಿರುವ ನರೇಂದ್ರ ಮೋದಿ ಮೊದಲು ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಅಲ್ಲಿಂದ ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಎಲ್ಲ ಪತ್ರಿಕೆಗಳಲ್ಲೂ ‘ರಾಜ್ಯಕ್ಕೆ ಮೋದಿ ನೇತೃತ್ವದ ಸರಕಾರದ ಕೊಡುಗೆ ಚೊಂಬು’ ಎಂದು ಕಾಂಗ್ರೆಸ್‌ ಜಾಹೀರಾತು ನೀಡಿದೆ. ಅದನ್ನು ನಾಯಕರು, ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲೂ ಗರಿಷ್ಠ ಮಟ್ಟದಲ್ಲಿ ಹಂಚಿಕೊಂಡಿದ್ದಾರೆ. ಇದರ ಜತೆಗೆ ಚುನಾವಣ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಮೋದಿಗೆ ಶನಿವಾರ ಚೊಂಬು ಪ್ರದರ್ಶಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಬಿಜೆಪಿ ವಿರುದ್ಧ ನೀವು ಚೊಂಬಿನ ಜಾಹೀರಾತು ನೀಡಿರಬಹುದು. ಆದರೆ ಕರ್ನಾಟಕದ ಜನತೆಗೆ ಚೊಂಬಿನಷ್ಟು ಕುಡಿಯುವ ನೀರು ಇಲ್ಲದಂಥ ಪರಿಸ್ಥಿತಿ ಸೃಷ್ಟಿಸಿದ್ದೀರಿ ಎಂದು ವಿಪಕ್ಷ ನಾಯಕ ಆರ್ ಅಶೋಕ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ ಚೊಂಬಿನ ಜಾಹೀರಾತು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Join Whatsapp
Exit mobile version